ಬೆಂಗಳೂರು : ರಾಜ್ಯ ಸರ್ಕಾರವು ಐವರು ಸಾಧಕರಿಗೆ 2025 ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025ನೇ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡಲು ದಿನಾಂಕ:03.10.2025 ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಣಯಿಸಿರುವಂತೆ, 2025ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ವಿಭಾಗವಾರು ಈ ಕೆಳಕಂಡ 05 ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲು ಮಂಜೂರಾತಿ ನೀಡಿ ಆದೇಶಿಸಿದೆ.
ಪ್ರಶಸ್ತಿ ಪುರಸ್ಕೃತರು
ನಾಗರಾಜು ಗಾಣದ ಹುಣಸೆ
ಪಿ.ತಿಪ್ಪೇಸ್ವಾಮಿ
ಜೆ.ಕೆ.ಮುತ್ತಮ್ಮ
ಮಳಸಿದ್ದ ಲಕ್ಷ್ಮಣ ನಾಯಕೋಡಿ
ಕೆ.ಉಚ್ಚಂಗಪ್ಪ
2025ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿರುವ ನಾಗರಾಜು ಗಾಣದ ಹುಣಸೆ, ಪಿ.ತಿಪ್ಪೇಸ್ವಾಮಿ, ಜೆ.ಕೆ.ಮುತ್ತಮ್ಮ, ಮಳಸಿದ್ದ ಲಕ್ಷ್ಮಣ ನಾಯಕೋಡಿ ಹಾಗೂ ಕೆ.ಉಚ್ಚಂಗಪ್ಪ ಅವರಿಗೆ ಅಭಿನಂದನೆಗಳು.
ಸಾಹಿತ್ಯ, ಸಂಘಟನೆ, ರಂಗಭೂಮಿ, ಮಾಧ್ಯಮ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಈ ಎಲ್ಲ ಗಣ್ಯರ ಸಾಧನೆ ಸಮಾಜಕ್ಕೆ ಮಾದರಿಯಾಗಲಿ ಎಂದು… pic.twitter.com/eKA9lvE8RO
— Siddaramaiah (@siddaramaiah) October 6, 2025