ಬೆಂಗಳೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಶಾಸಕ ʻಎಂ.ವೈ.ಪಾಟೀಲ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ 1950 ಕಲಂ 5 ರ ಉಪಕಲಂ (2) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಯಮಾವಳಿಗಳು, 1961ರ ನಿಯಮ 3(3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶ್ರೀ ಎಂ. ವೈ. ಪಾಟೀಲ್, ಮಾನ್ಯ ಶಾಸಕರು, ಅಫಜಲ್ಪುರ ವಿಧಾನಸಭಾ ಕ್ಷೇತ್ರ ಇವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ.