ಬೆಂಗಳೂರು : ಕನ್ನಡ ಧ್ವಜಕ್ಕೆ ರಾಜ್ಯ ಸರ್ಕಾರವು ಮತ್ತೆ ಹಕ್ಕು ಮಂಡಿಸಿದೆ. ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ಶಿವರಾಜ್ ತಂಗಡಗಿ ಪತ್ರ ಬರೆದಿದ್ದಾರೆ.
ಕನ್ನಡ ಬಾವುಟಕ್ಕೆ ಮಾನ್ಯತೆ ನೀಡುವಂತೆ 2017 ರಲ್ಲೂ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಸರ್ಕಾರ ಪತ್ರ ಬರೆದಿತ್ತು. ಇದೀಗ ಮತ್ತೆ ಕನ್ನಡ ಬಾವುಟಕ್ಕೆ ಮಾನ್ಯತೆ ನೀಡುವಂತೆ ಪತ್ರ ಬರೆಯಲಾಗಿದೆ.
ಪಕ್ಕದ ತಮಿಳುನಾಡಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ಶೀಘ್ರದಲ್ಲೇ ನವದೆಹಲಿಗೆ ತಂಗಡಗಿ ನೇತೃತ್ವದ ನಿಯೋಗ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿಯಾಗಿ, ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಅನುದಾನ ಕೋರಿ ಮನವಿ ಮಾಡಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.