ಬೆಂಗಳೂರು : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡದೇ ಇರಲು (Opt-in, Opt-out) ನಿಗದಿಪಡಿಸಲಾಗಿರುವ ದಿನಾಂಕವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರವು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡದೇ ಇರಲು (Opt-in, Opt-Out) ಲಿಖಿತ ಘೋಷಣೆಯನ್ನು ಸಂಬಂಧಪಟ್ಟ ಡಿ.ಡಿ.ಓ.ಗಳಿಗೆ ಸಲ್ಲಿಸಲು ದಿನಾಂಕ 18.10.2025 ರವರೆಗೆ ಕಾಲಾವಕಾಶವನ್ನು ನೀಡಿ, ಸದರಿ ದಿನಾಂಕದೊಳಗೆ ಈ ಯೋಜನೆಗೆ ಒಳಪಡದೇ ಇರಲು ಲಿಖಿತವಾಗಿ ಇಚ್ಛೆ ವ್ಯಕ್ತಪಡಿಸದ ನೌಕರರು ಯೋಜನೆಗೆ ಒಳಪಡುವರೆಂದು ಪರಿಗಣಿಸಲಾಗುವುದೆಂದು ಮೇಲೆ ಓದಲಾದ ದಿನಾಂಕ 23.09.2025 ರ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿತ್ತು.
ಆದರೆ, ರಾಜ್ಯ ಸರ್ಕಾರವು ಕೈಗೆತ್ತಿಕೊಂಡಿರುವ ರಾಜ್ಯ ವ್ಯಾಪಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಬಹುತೇಕ ಸರ್ಕಾರಿ ನೌಕರರು ತೊಡಗಿದ್ದರಿಂದ, ಹಲವಾರು ನೌಕರರಿಗೆ ಈ ಯೋಜನೆಗೆ ಒಳಪಡಲು ಅಥವಾ ಒಳಪಡದೇ ಇರಲು ತಮ್ಮ ಅಭಿಮತ ವ್ಯಕ್ತಪಡಿಸಲು ಅವಕಾಶವಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ, ಈ ಸೂಚನೆಗಳನ್ನು ಭಾಗಶ: ಮಾರ್ಪಡಿಸಿ, ಇಂತಹ ಘೋಷಣೆಯನ್ನು ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ .
ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020
ಬೆಂಗಳೂರು, ದಿನಾಂಕ: 03.11.2025.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡದೇ ಇರಲು (Opt-in, Opt-out) ಲಿಖಿತ ಘೋಷಣೆಯನ್ನು ಸಂಬಂಧಪಟ್ಟ ಡಿ.ಡಿ.ಓ.ಗಳಿಗೆ ಸಲ್ಲಿಸಲು ನಿಗದಿಪಡಿಸಲಾಗಿರುವ ಕಾಲಾವಕಾಶವನ್ನು ದಿನಾಂಕ 25.11.2025 ರವರೆಗೆ ವಿಸ್ತರಿಸಿ ಆದೇಶಿಸಿದೆ.
2025 ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ದಿನಾಂಕ 23.09.2025ರ ಸರ್ಕಾರಿ ಆದೇಶದಂತೆ ದಿನಾಂಕ 18.10.2025 ರೊಳಗೆ Opt-out ಆಗದೆ, ಈ ಆದೇಶದಲ್ಲಿ ವಿಸ್ತರಿಸಿರುವಂತೆ ನವೆಂಬರ್ ರವರೆಗೆ ನೀಡಿರುವ ಕಾಲಾವಕಾಶವನ್ನು ಉಪಯೋಗಿಸಿಕೊಂಡು ಯೋಜನೆಯಿಂದ Opt-out ಆದಲ್ಲಿ, ಅಂತಹ ನೌಕರರ ವೇತನದಲ್ಲಿ ಮಾಸಿಕ ವಂತಿಕೆಯನ್ನು ನವೆಂಬರ್ 2025 ರಿಂದ ಕಟಾವಣೆಗೊಳಿಸದಿರಲು ಎಲ್ಲಾ ಇಲಾಖಾ ಮುಖ್ಯಸ್ಥರು/ಡಿ.ಡಿ.ಓ. ಗಳಿಗೆ ಸೂಚಿಸಲಾಗಿದೆ.
 
		






