ಬೆಂಗಳೂರು : ಕರ್ನಾಟಕ ಸರ್ಕಾರದ ಮಂತ್ರಿ, ಶಾಸಕರ ವೇತನ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಭತ್ಯೆ ತಿದ್ದುಪಡಿ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಶಾಸಕರು, ಸಚಿವರು, ಸಿಎಂ, ಸಭಾಪತಿಗಳ ಸಂಬಳ ಹೆಚ್ಚಳ ಮಾಡುವ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ.
ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ. ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;
ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ రాజ్య ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-
1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ
ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.
2. ಪ್ರಕರಣ 3ರ ತಿದ್ದುಪಡಿ.- ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ
ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 3ನೇ ಪ್ರಕರಣದಲ್ಲಿ,
(i) ಉಪಪ್ರಕರಣ (1)ರಲ್ಲಿ, “ಎಪ್ಪತ್ತೈದು ಸಾವಿರ ರೂಪಾಯಿಗಳ” ಎಂಬ ಪದಗಳ ಬದಲಿಗೆ “ಒಂದು ಲಕ್ಷದ ಇಪ್ಪತ್ತೈದು ಸಾವಿರ ರೂಪಾಯಿಗಳ” ಎಂಬ ಪದಗಳನ್ನು ಮತ್ತು “ನಾಲ್ಕು ಲಕ್ಷ ರೂಪಾಯಿಗಳ” ಎಂಬ ಪದಗಳ ಬದಲಿಗೆ “ಐದು ಲಕ್ಷ ರೂಪಾಯಿಗಳ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;
(ii) ಉಪಪ್ರಕರಣ (2)ರಲ್ಲಿ, “ಎಪ್ಪತ್ತೈದು ಸಾವಿರ ರೂಪಾಯಿಗಳ” ಎಂಬ ಪದಗಳ ಬದಲಿಗೆ “ಒಂದು ಲಕ್ಷದ ಇಪ್ಪತ್ತೈದು ಸಾವಿರ ರೂಪಾಯಿಗಳ” ಎಂಬ ಪದಗಳನ್ನು ಮತ್ತು “ನಾಲ್ಕು ಲಕ್ಷ ರೂಪಾಯಿಗಳ” ಎಂಬ ಪದಗಳ ಬದಲಿಗೆ “ಐದು ಲಕ್ಷ ರೂಪಾಯಿಗಳ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;
3. ಪ್ರಕರಣ 4ರ ತಿದ್ದುಪಡಿ.- ಮೂಲ ಅಧಿನಿಯಮದ 4ನೇ ಪ್ರಕರಣದಲ್ಲಿ,
(i) ಉಪಪ್ರಕರಣ (1)ರಲ್ಲಿ, “ಒಂದು ಲಕ್ಷದ ಅರವತ್ತು ಸಾವಿರ ರೂಪಾಯಿಗಳ” ಎಂಬ ಪದಗಳ ಬದಲಿಗೆ “ಎರಡು ಲಕ್ಷ ಐವತ್ತು ಸಾವಿರ ರೂಪಾಯಿಗಳ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;
(ii) (2)ನೇ ಉಪಪ್ರಕರಣದಲ್ಲಿ, “ಇಪ್ಪತ್ತು ಸಾವಿರ ರೂಪಾಯಿಗಳ” ಎಂಬ ಪದಗಳ ಬದಲಿಗೆ “ಇಪ್ಪತ್ತೈದು ಸಾವಿರ ರೂಪಾಯಿಗಳ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.
4. ಪ್ರಕರಣ 8ರ ತಿದ್ದುಪಡಿ.- ಮೂಲ ಅಧಿನಿಯಮದ 8ನೇ ಪ್ರಕರಣದ, (2)ನೇ ಉಪಪ್ರಕರಣದ, (ಡಿ) ಖಂಡದ ಮೊದಲನೇ ಪರಂತುಕದಲ್ಲಿ, ” ಮೂರು ಸಾವಿರದ ಐದುನೂರು.