ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಅಪಮಾನಕ್ಕೆ ಒಳಗಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರ ಸ್ವಯಂ ನಿವೃತ್ತಿ ವಿಚಾರದಲ್ಲಿ ಸರ್ಕಾರ ಮತ್ತೊಂದು ಯಡವಟ್ಟು ಮಾಡಿದ್ದು, ಸ್ವಯಂ ನಿವೃತ್ತಿಗೆ ಗೃಹ ಇಲಾಖೆ ಸೂಚನೆ ನೀಡಿದೆ.
ಹೌದು ಗೃಹ ಇಲಾಖೆಯಿಂದ ಸ್ವಯಂ ನಿವೃತ್ತಿ ಅಂಗೀಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಜುಲೈ 6ಕ್ಕೆ ಡೆಡ್‌ಲೈನ್ ಫಿಕ್ಸ್ ಮಾಡಿದ್ದು, ಅಷ್ಟರೊಳಗೆ ವಿಆರ್‌ಎಸ್ ಪತ್ರ ವಾಪಸ್ ಪಡೆಯದೇ ಇದ್ದರೆ ಸ್ವಯಂ ನಿವೃತ್ತಿ ಅಂಗೀಕರಿಸುವಂತೆ ಸೂಚನೆ ನೀಡಲಾಗಿದೆ.
ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆಗೆ ಮುಂದಾಗಿದ್ದರಿಂದ ಆಕ್ರೋಶಗೊಂಡ ಸಿಎಂ, ಅಧಿಕಾರಿ ಮೇಲೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು.
ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ತಮಗಾದ ಅವಮಾನಕ್ಕೆ ಭರಮನಿ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅಧಿಕಾರಿಯ ನಡೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಬಳಿಕ ಹಿರಿಯ ಅಧಿಕಾರಿಗಳು ಮನವೊಲಿಸಲು ಯತ್ನಿಸಿದ್ದರು. ಆದರೆ ಇದೀಗ ಜುಲೈ 6ರ ಒಳಗೆ ಸ್ವಯಂ ನಿವೃತ್ತಿಗೆ ಸಲ್ಲಿಸಿರುವ ಅರ್ಜಿ ಹಿಂಪಡೆಯದೇ ಇದ್ದರೆ, ಅಂಗೀಕರಿಸುವಂತೆ ಗೃಹ ಇಲಾಖೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.