ಬೆಂಗಳೂರು : ಜೇವರ್ಗಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಭೀಕರವಾದ ಕಾರು ಅಪಘಾತದಲ್ಲಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹಾಂತೇಶ ಬೀಳಗಿ, ಹಿರಿಯ ಭಾರತೀಯ ಆಡಳಿತ ಸೇವೆ ಅಧಿಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಇವರು ದಿನಾಂಕ:25.11.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.
ಹುಟ್ಟೂರು ರಾಮದುರ್ಗಕ್ಕೆ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಪಾರ್ಥಿವ ಶರೀರ ರವಾನೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ
ಮಹಾಂತೇಶ್ ಬೀಳಗಿಯವರ ಪಾರ್ಥಿವ ಶರೀರ ರಾಮದುರ್ಗದ ಸ್ವಗ್ರಹಕ್ಕೆ ರವಾನಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮಂಗಳವಾರ ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಗೌನಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.









