ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 64 ಮಂದಿ ಪಿಎಸ್ ಐ ಹಾಗೂ 36 ಮಂದಿ ಎಎಸ್ ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕೇಂದ್ರವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಸ್ಥಳ ನಿರೀಕ್ಷಣೆಯಲ್ಲಿರುವ ಈ ಕೆಳಕಂಡ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್ ಮತ್ತು ಡಿಎಆರ್) ರವರುಗಳನ್ನು ಸಾರ್ವಜನಿಕ/ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಠಿಯ ಮೇರೆಗೆ ಅವರುಗಳ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸ್ಥಳ ನಿಯುಕ್ತಿ ಮಾಡಲಾಗಿದೆ.










