ಬೆಂಗಳೂರು : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ ಪಾನ್ ಮಸಾಲ ಹಾಗೂ ತಂಬಾಕು ಜಾಹೀರಾತುಗಳನ್ನು ಪ್ರಕಟಿಸದಂತೆ ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.
ಗುಟ್ಕಾ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳ ಕುರಿತು ರಾಜ್ಯ ಸರ್ಕಾರದ ಸಾರಿಗೆ ಬಸ್ಗಳಲ್ಲಿ ಸ್ಟಿಕರ್ ಅಂಟಿಸಿ ಜಾಹೀರಾತು ಪ್ರಚಾರ ಕೈಗೊಳ್ಳಲಾಗಿತ್ತು. ಇದೀಗ ಸಚಿವ ರಾಮಲಿಂಗ ರೆಡ್ಡಿ ಅವರು ರಾಜ್ಯದ ಸರ್ಕಾರಿ ಬಸವನ ಮೇಲೆ ಗುಟ್ಕಾ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರಕಟಿಸಿದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ.








