ಬೆಂಗಳೂರು : 2023ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲಿನ ಕ್ರಮ ಸಂಖ್ಯೆ (1)ರ ಆದೇಶದಲ್ಲಿ ಅತ್ಯುನ್ನತ ಸೇವೆಗೈದ / ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲು ಸರ್ಕಾರವು ತೀರ್ಮಾನಿಸಿದೆ. ಇದರನ್ವಯ ರಾಜ್ಯ, ಇಲಾಖೆ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ನೀಡಲು ಸರ್ಕಾರವು ತೀರ್ಮಾನಿಸಿ ಆದೇಶಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಆದೇಶದಲ್ಲಿ ರಾಜ್ಯ ಸರ್ಕಾರದ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸಂಬಂಧಿಸಿದಂತೆ, ಹಲವಾರು ಮಾರ್ಪಾಡು, ಸೇರ್ಪಡೆಗಳನ್ನು ಅಳವಡಿಸಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಒಳಗೊಂಡ ಆದೇಶಗಳನ್ನು ಹೊರಡಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಆದೇಶದಲ್ಲಿ 2022ನೇ ಸಾಲಿನಿಂದ ಅನ್ವಯಿಸುವಂತೆ ಜಿಲ್ಲಾ ಮಟ್ಟದ ಸೇವಾ ಪ್ರಶಸ್ತಿಯ ಮೊತ್ತವನ್ನು ಪ್ರತಿ ಪ್ರಶಸ್ತಿಗೆ ರೂ.25,000/-ಗಳನ್ನು ಪ್ರಶಸ್ತಿ ಮೊತ್ತವಾಗಿ ನೀಡಲು ತೀರ್ಮಾನಿಸಲಾಗಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (4)ರ ಆದೇಶದಲ್ಲಿ 2023ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಏಪ್ರಿಲ್, 21ರಂದು ಆಚರಿಸುವ ಕಾರ್ಯಕ್ರಮವನ್ನು ಜಿಲ್ಲಾಡಳಿತವು ಆಯೋಜಿಸಲು ಅನುವಾಗುವಂತೆ, ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಒಟ್ಟು ಮೊತ್ತ ರೂ.1,00,000/-ಗಳ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದ್ದು, 2023ನೇ ಸಾಲಿಗೆ ಸಂಬಂಧಿಸಿದ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು ತಮ್ಮಲ್ಲಿ ಲಭ್ಯವಿರುವ ಮೊತ್ತದಿಂದ ಭರಿಸುವುದು ಹಾಗೂ ಆಯ್ಕೆ ಸಮಿತಿಯ ನಡೆವಳಿಯೊಂದಿಗೆ ಇತರೆ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿದಲ್ಲಿ, ಸದರಿ ಮೊತ್ತವನ್ನು ತದನಂತರ ಸರ್ಕಾರದಿಂದ ಹಿಂಬರಿಸಲಾಗುವುದು ಎಂದು ಆದೇಶಿಸಲಾಗಿರುತ್ತದೆ.
2023ನೇ ಸಾಲಿಗೆ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಸಂಬಂಧ 22 ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಡೆವಳಿಯನ್ನು ಕಳುಹಿಸಿರುತ್ತಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023ನೇ ಸಾಲಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು ಈ ಕೆಳಕಂಡ 22 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 54,25,000/-(ಐವತ್ತನಾಲ್ಕು ಲಕ್ಷದ ಇಪ್ಪತ್ತೈದು ಸಾವಿರ ರೂ.ಗಳು ಮಾತ್ರ) ಗಳನ್ನು ಬಿಡುಗಡೆ ಮಾಡಿ ಆದೇಶಿಸಿದೆ.
 
 
		







