ಬೆಂಗಳೂರು: ರಾಜ್ಯ ಸರ್ಕಾರವು ಮತ್ತೆ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಪಂಚಾಯತ್ರಾಜ್ ಇಲಾಖೆ ಕಾರ್ಯದರ್ಶಿ ಡಿ.ರಂದೀಪ್ ಅವರಿಗೆ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂ.ಎಸ್.ದಿವಾಕರ್ ಅವರಿಗೆ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ) ನಿರ್ದೇಶಕ ಹುದ್ದೆಗೆ ಹೆಚ್ಚುವರಿಯಾಗಿ ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆ ನೀಡಲಾಗಿದೆ.
ನಿತೇಶ್ ಪಾಟೀಲ್-ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು, ಆರ್.ರಾಮಚಂದ್ರನ್-ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಕಾರಿ ನಿರ್ದೇಶಕ, ಡಾ.ಬಿ.ಸಿ.ಸತೀಶ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನಿರ್ದೇಶಕ ಹುದ್ದೆಗೆ ಸರಕಾರ ವರ್ಗಾವಣೆ ಮಾಡಿದೆ.