ಬೆಂಗಳೂರು :ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು. ಅಧಿವೇಶನ ನಿಗದಿಯಾದ ಹಿನ್ನೆಲೆ ಸರ್ಕಾರಕ್ಕೆ ವಾಪಸ್ ಕಳಿಸಿದ್ದರು. ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದ್ದರು. ಅದರಂತೆಯೇ ಈಗ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.
ವಿಧಾನಮಂಡಲ ಬಜೆಟ್ ಅಧಿವೇಶನದ ಐದನೇ ದಿನವಾದ ಇಂದೂ ಹಲವು ವಿಚಾರಗಳ ಬಗ್ಗೆ ವಿಪಕ್ಷ ಹಾಗೂ ಪ್ರತಿಪಕ್ಷ ನಡುವೆ ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಿದೆ. ಸದ್ಯ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದರು.ಈಗ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.
BIG NEWS : ಮೈಸೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ಓರ್ವ ಬಾಲಕಿಯ ರಕ್ಷಣೆ, ಇಬ್ಬರ ಬಂಧನ
BIG NEWS : ರಾಜ್ಯದ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ : ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
BREAKING:ಆರೋಗ್ಯದ ಕಾರಣದಿಂದ ಲೋಕಸಭೆಗೆ ಸ್ಪರ್ಧಿಸಲು ಸಾಧ್ಯವಿಲ್ಲ: ಸೋನಿಯಾ ಗಾಂಧಿ