ಬೆಂಗಳೂರು : ರಾಜ್ಯ ಸರ್ಕಾರವು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈ ಮೂಲಕ ರಾಜಕೀಯ ಸಂಘರ್ಷಕ್ಕೆ ತೆರೆ ಬಿದ್ದಿದೆ.
ರಾಜ್ಯ ಸರ್ಕಾರವು ಈ ಹಿಂದೆ ಹಲವು ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿರಲಿಲ್ಲ. ಈ ವಿಚಾರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು. ಇದೀಗ ರಾಜ್ಯ ಸರ್ಕಾರ 10 ಕೋಟಿ ಅನುದಾನ ಬಿಡುಗಡೆ ಮಾಡಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ.
ಜಯನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಬೆಂಗಳೂರಿನ ಉಳಿದೆಲ್ಲ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿರುವ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಜಯನಗರಕ್ಕೆ ಅನುದಾನ ನೀಡದಿರುವುದಕ್ಕೆ ಕ್ಷೇತ್ರದ ಶಾಸಕ ಮಾತ್ರವಲ್ಲದೇ ವಿವಿಧ ಸಂಘ-ಸಂಘಟನೆಗಳು ಸಿಡಿದಿದ್ದವು. ಕ್ಷೇತ್ರದ ಶಾಸಕ ರಾಮಮೂರ್ತಿ ಅವರ ಬೆನ್ನಿಗೆ ನಿಂತು ಸಂಘಟನೆಗಳು ಅನುದಾನ ಕೊಡಲೇಬೇಕೆಂದು ಪಟ್ಟುಹಿಡಿದಿದ್ದವು. ಇದೀಗ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.