ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಆಗಸ್ಟ್ 19 ರ ನಾಳೆ ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 19-08-2025ರ ಮಂಗಳವಾರ ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ಬಂದಿದ್ದು, ಆಗಸ್ಟ್ 19 ರಂದು ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.