ಬೆಂಗಳೂರು : ನವೆಂಬರ್ 6 ರ ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ದಿನಾಂಕ: 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನೂತನ ಕಾಯ್ದೆ ಜಾರಿಗೊಳಿಸುವ ಬಗ್ಗೆ ಕರಡು ನಿಯಮಗಳಿಗೆ ಅಂಗೀಕಾರ ನೀಡುವ ಸಾಧ್ಯತೆ ಇದೆ.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಕಿ ಅಂಶಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡುವ ಸಾಧ್ಯತೆ ಇದೆ.
ಬೆಳಗಾವಿ ಚಳಿಗಾಲದ ಅಧಿವೇಶನ ನಡೆಸಲು ದಿನಾಂಕ ಅಂತಿಮಗೊಳಿಸುವ ಸಾಧ್ಯತೆ ಇದೆ. ಡಿಸೆಂಬರ್ 8 ರಿಂದ 19 ರವರೆಗೆ 10 ದಿನ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಇಂದು ಸಂಪುಟ ಸಭೆಯಲ್ಲಿ ಅಧಿಕೃತ ದಿನಾಂಕ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.









