ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಹಲವು ಬಾರಿ ಮನವಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇನ್ನೂವರೆಗೂ ಅನುದಾನ ಜಾರಿ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.
ಇಂದು ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ 5 ತಿಂಗಳಗಳ ಕಾಲ ಕಾದಿದೆ. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಆರ್ಟಿಕಲ್ 32ರ ಅಡಿ ಕೇಂದ್ರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಬರ ಪರಿಹಾರ ಕೊಡಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಬರ ಪರಿಹಾರಕ್ಕಾಗಿ ಆರ್ಟಿಕಲ್ 32ರ ಅಡಿ ಕೇಂದ್ರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ. ಸುಪ್ರೀಂ ಕೋರ್ಟ್ ಗೆ ರಜೆ ಇರುವ ಕಾರಣ ಅರ್ಜಿ ವಿತರಣೆಗೆ ಬಂದಿಲ್ಲ.ಒಂದು ವಾರ ರಜೆ ಮುಗಿದ ಬಳಿಕ ಕೂಡಲೇ ವಿಚಾರಣೆಗೆ ತೆಗೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ಸರ್ಕಾರ 5 ತಿಂಗಳ ವರೆಗೆ ಕಾದಿದೆ.ಕೇಂದ್ರ ಸರ್ಕಾರದ ವಿರುದ್ಧ ಈಗ ನಾವು ಹೋರಾಟಕ್ಕೆ ನಿರ್ಧರಿಸಿದ್ದೇವೆ. ಎನ್ ಡಿ ಆರ್ ಎಫ್ ಡಿ ಹಾಗೂ ಎಸ್ ಡಿ ಆರ್ ಎಫ್ ನಲ್ಲಿ ಪ್ರತಿ ವರ್ಷ ಎಷ್ಟು ಹಣ ಇರಬೇಕೆಂದು ನಿರ್ಧರಿಸುತ್ತದೆ.ಎಷ್ಟು ಬರ ಪರಿಹಾರ ಇಡಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ.ಕೇಂದ್ರ ಸರ್ಕಾರ ಶೇಕಡ 75 ರಷ್ಟು ಕೊಡುತ್ತದೆ ಹಾಗೂ ರಾಜ್ಯ ಸರ್ಕಾರ 25 ರಷ್ಟು ಭರಿಸುತ್ತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
BREAKING : ಬಿಗ್ ಬಾಸ್ ‘OTT’ 2ರ ವಿಜೇತ ಎಲ್ವಿಶ್ ಯಾದವ್ ಗೆ ‘ಬಿಗ್ ರಿಲೀಫ್’ : ಜಾಮೀನು ನೀಡಿದ ಕೋರ್ಟ್
ಕೇಂದ್ರದ ಬಲಿ ರಾಜ್ಯ ಸರ್ಕಾರದ ಮನವಿ ಏನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೃಷಿ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.
ಹೀಗಾಗಿ ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.
ಮನವಿ ಸಲ್ಲಿಸಿ ನಾಲ್ಕು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೋರೆ ಹೋಗಲು ನಿರ್ಧರಿಸಿದೆ.
BREAKING : ‘ಈರುಳ್ಳಿ ರಫ್ತು’ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ |Onion Export Ban