ಬೆಂಗಳೂರು : ಆಹಾರ ಸುರಕ್ಷತೆ ಗುಣಮಟ್ಟ & ಔಷಧ ನಿಯಂತ್ರಣ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಹೊಸ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಿದೆ. ರಾಜ್ಯ ಸರ್ಕಾರವು ಆಹಾರ ಸರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೆ ಮುಖ್ಯಸ್ಥರಾಗಿ ನೇಮಕವಾಗಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರ ನಿಯಂತ್ರಣದಲ್ಲಿಯೇ ಕೆಲಸ ನಿರ್ವಹಿಸಲಿದ್ದು, ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಸೂಚಿಸಿದೆ.ಈ ಮೂಲಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದು ರಾಜ್ಯ ಸರ್ಕಾರ ಮುಜುಗರಗೊಳ್ಳುವಂತೆ ಮಾಡಿತ್ತು. ಬಳಿಕ, ಡಿಸೆಂಬರ್ 6 ರಂದು ನಡೆದ ಸಂಪುಟ ಸಭೆಯಲ್ಲಿ ಎರಡೂ ಇಲಾಖೆ ವಿಲೀನಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಸರ್ಕಾರ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶ ಹೊರಡಿಸಿದೆ.