ಬೆಂಗಳೂರು : ಇತ್ತೀಚಿಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದರ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಹೌದು ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದನ್ನು ಹಾಗೂ ಹಾಗೂ ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದರು.
ಪತ್ರದ ಮೂಲಕ ಸರ್ಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ ಎಂದು ತಿಳಿದುಬಂದಿದೆ.
ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತದ ತಡೆಯ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ರಚಿಸಲಾದ ತಜ್ಞರ ಸಮಿತಿಗೆ ಅರಣ್ಯ ಇಲಾಖೆ ಸೂಚನೆಯನ್ನು ನೀಡಿದೆ.
ಕಾವೇರಿ ನದಿ ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದು ಸಮಸ್ಯೆಯ ತೀವ್ರತೆಯನ್ನು ವಿವರಿಸಿದ್ದರು. ಈಗ ಅವರ ಸೂಚನೆ ಮೇರೆಗೆ ಸಮಿತಿಯನ್ನು ರಚನೆ ಮಾಡಿ ಆದೇಶಿಸಲಾಗಿದೆ.