ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಮಾಡಿದ್ದು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
ವರ್ಗಾವಣೆಗೊಂಡ `KAS’ ಅಧಿಕಾರಿಗಳು
1. ಎಸ್ ಎಂ ಶಿವಕುಮಾರ್
ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸ್ಥಳ ನಿರೀಕ್ಷಣೆ
2. ಡಾ. ಮಧು ಎನ್ ಎನ್.
ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಮುಖ್ಯ ಜಾಗೃತಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು