ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಜೆಟ್ ಬ್ರೇಕಿಂಗ್: ಮಾಜಿ ದೇವದಾಸಿ & ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ ಹೆಚ್ಚಳ
10 ಮಹಾನಗರ ಪಾಲಿಕೆಗಳಲ್ಲಿ 2,000 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಯೋಜನೆ ಜಾರಿ ಮಾಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಇದೇ ವೇಳೆ ಅವರು 441 ಕೋಟಿ ರೂ. ವೆಚ್ಚದಲ್ಲಿ ಒಟ್ಟು 268 ಎಂ.ಎಲ್.ಡಿ. ಸಂಸ್ಕರಣಾ ಸಾಮರ್ಥ್ಯದ 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ ಅಂತ ತಿಳಿಸಿದರು. ಇದೇ ವೇಳೆ ಪೌರ ನೌಕರರನ್ನು ಹಂತ ಹಂತವಾಗಿ ಖಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಲಾಗಿದೆ ಅಂತ ತಿಳಿಸಿದರು.