ನವದೆಹಲಿ : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನ ಹರಾಟದಲ್ಲಿ ತೀವ್ರ ಸಮಸ್ಯೆ ಎದುರಾಗಿತ್ತು. ಇದೀಗ ನವದೆಹಲಿಯಲ್ಲಿ ಮತ್ತೆ ಇಂಡಿಗೋ ವಿಮಾನ ಹಾರಾಟದಲ್ಲಿ ಸಮಸ್ಯೆ ಆಗಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಹಾರಾಟಕ್ಕೆ ತಡವಾಗಿದೆ.
ಹಾಗಾಗಿ ದೆಹಲಿಯಲ್ಲಿಯೇ ಕಾಂಗ್ರೆಸ್ ನಾಯಕರು ಲಾಕ್ ಆಗಿದ್ದಾರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ತಡವಾಗಿದೆ. ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ನಾಯಕರು ಹೊರಟಿದ್ದರು. ಸುಮಾರು 20 ಕ್ಕೂ ಹೆಚ್ಚು ಶಾಸಕರು ಇಂಡಿಗೋ ವಿಮಾನದಲ್ಲಿ ಲಾಕ್ ಆಗಿದ್ದಾರೆ.
ಇಂದು ಬೆಳಿಗ್ಗೆ 6:45 ಕ್ಕೆ ಇಂಡಿಗೋ ವಿಮಾನ ಟೇಕ್ ಆಫ್ ಆಗಬೇಕಾಗಿತ್ತು. ಆದರೆ ಇನ್ನೂ ಆಗಿಲ್ಲ. ವಿಮಾನದಲ್ಲಿ ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‌ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಕೆಜೆ ಜಾರ್ಜ್.








