ಮಂಡ್ಯ: ಜಿಲ್ಲೆಯಲ್ಲಿ ಮದ್ದೂರಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಇದೀಗ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ನಾಳೆ ಬೆಳಗ್ಗೆ ವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅನ್ಯಕೋಮಿನವರು ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾಗಿ ಆರೋಪಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದರಿಂದ ಹಲವರಿಗೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಸ್ಥಳದಲ್ಲಿದ್ದಂತ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಗಣೇಶ ಮೆರವಣಿಗೆ ಮುಂದುವರೆಸಲು ಅವಕಾಶ ಮಾಡಿಕೊಟ್ಟರು.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ. ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಉಂಟಾದಂತ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಗಲಭೆ ಖಂಡಿಸಿ ಹಿಂದೂ -ಮುಸ್ಲೀಂ ಮುಖಂಡರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಮದ್ದೂರು ಪಟ್ಟಣದಾದ್ಯಂತ ಭಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು, 20ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.