ಹೈದರಾಬಾದ್ : ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 8 ಮಂದಿಯನ್ನು ಬಂಧಿಸಲಾಗಿದೆ.
ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಸದಸ್ಯರು ಚಿತ್ರನಟ ಅಲ್ಲು ಅರ್ಜುನ್ ಅವರ ಮನೆ ಎದುರು ಭಾನುವಾರ ಸಂಜೆ ಪ್ರತಿಭಟನೆ ನಡೆಸಿದರು. ಅಲ್ಲು ಅರ್ಜುನ್ ಅವರು ಮಹಿಳೆಯ ಕುಟುಂಬಕ್ಕೆ 1 ಕೋಟಿ ರೂಪಾಯಿ ನೆರವು ನೀಡಬೇಕು ಮತ್ತು ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಬೇಕು ಎಂದು ಪ್ರತಿಭಟನಾಕಾರರು ಜೆಎಸಿಯಿಂದ ಒತ್ತಾಯಿಸಿದರು.
ಪ್ರತಿಭಟನಾಕಾರರು ನಟನ ಮನೆ ಮುಂದೆ ಘೋಷಣೆಗಳನ್ನು ಕೂಗಿದರು ಮತ್ತು ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಪ್ರಯತ್ನಿಸಿದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಜೆಎಸಿ ಮುಖಂಡರನ್ನು ವಶಕ್ಕೆ ಪಡೆದರು. ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಅಲ್ಲು ಅರ್ಜುನ್ ತಮ್ಮ ಮನೆಯಲ್ಲಿ ಇರಲಿಲ್ಲ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಭದ್ರತೆ ಹೆಚ್ಚಿಸಲಾಗಿದೆ.
ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅಲ್ಲು ಅರ್ಜುನ್ ಮನೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಮನೆಯ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಧ್ವಂಸಗೊಳಿಸಲಾಗಿದೆ. ಮೇಲಾಗಿ ಅಲ್ಲು ಅರ್ಜುನ್ ಮನೆಗೆ ಕಲ್ಲು ಎಸೆಯಲಾಗಿದೆ.
Attack and stone pelting at the house of #AlluArjun.
It seems Congress is taking personal revenge against him… Truly shameful, state-sponsored goondaism. pic.twitter.com/u5CQz6ZQdc
— Mr Sinha (@MrSinha_) December 22, 2024