ಹಾಸನ : ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಹಾಸನ ಜಲ್ಲೆಯ ಮೂಡಲಹಿಪ್ಪೆ ಗ್ರಾಮದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆ ಗ್ರಾಮದಲ್ಲಿರುವ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಮನೆ ಮೇಲೆ ನಿನ್ನೆ ರಾತ್ರಿ ಮೂವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಚಾಲಕ ಅಜಿತ್ ಭಾಗಿಯಾಗಿರುವ ಆರೋಪ ಇದ್ದು, ಈ ನಡುವೆ ಕುಟುಂಬಸ್ಥರು ಮನೆಯಲ್ಲಿದ್ದ ವೇಳೆ ಮೂವರು ಮನೆ ಮೇಲೆ ಕಲ್ಲೆಸೆದು ಪರಾರಿಯಾಗಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ನಡೆದಿದೆ.