ಚಿಕ್ಕಮಗಳೂರು : ಚಿಕ್ಕಮಗಳೂರಿನ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಬಳಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಚಿಕ್ಕಮಗಳೂರಿನ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಬಳಿಯ ಸುಧಾ ಎಂಬುವರ ಮನೆ ಮೇಲೆ ಅನ್ಯ ಕೋಮಿನ ಯುವಕರು ನಿರಂತರ ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಗೆ ಸುಧಾ ದೂರು ದಾಖಲಿಸಿದ್ದಾರೆ.
ಕಲ್ಲು ತೂರಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಬಜರಂಗದಳ ಒತ್ತಾಯಿಸಿದೆ.








