ಉತ್ತರಪ್ರದೇಶ : ನಿನ್ನೆ ಸಂಜೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಲಿಸುತ್ತಿದ್ದ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ವರದಿಯಾಗಿದೆ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲುತೂರಾಟ ನಡೆದಿದೆ.
ಗೋಲ್ಡನ್ ಚಾರಿಯಟ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಫಿರೋಜ ಬಾನಲ್ಲಿ ಒಂದು ಘಟನೆ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ. ಇದೇ ರೈಲಿನಲ್ಲಿ ಆರ್ಎಸ್ಎಸ್ ಮುಖ್ಯಸ್ಥರಾಗಿರುವಂತ ಮೋಹನ್ ಭಾಗವತ್ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.








