ಬೆಂಗಳೂರು : ಮಂಡ್ಯ ಬಳಿಕ ಇದೀಗ ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ ನಡೆದಿದ್ದು, ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ಚಾಮರಾಜಪೇಟೆ ಬಳಿಯ ಜೆ.ಜೆ.ನಗರ (ಜಗಜೀವನ್ ರಾಮ್ ನಗರ) ಠಾಣೆವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.ಇದೀಗ ಓಂ ಶಕ್ತಿ ಅಧ್ಯಕ್ಷ ಶಶಿಕುಮಾರ್ ಅವರು ನೀಡಿದ ದೂರಿನ ಮೇರೆಗೆ FIR ದಾಖಲಾಗಿದೆ.ಮೂರ್ನಾಲ್ಕು ಮುಸ್ಲಿಂ ಯುವಕರು ಕಲ್ಲು ತೂರಾಟ ಮಾಡಿದ್ದು, ಓರ್ವ ಹೆಣ್ಣು ಮಗಳ ತಲೆಗೆ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೆಖಿಸಿದ್ದಾರೆ.
ಜೆ.ಜೆ.ನಗರದ ವಿ.ಎಸ್. ಗಾರ್ಡನ್ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವರದರಾಜು ಎಂಬುವರ ಅಪ್ರಾಪ್ತ ಮಗಳ ತಲೆಗೆ ಗಂಭೀರವಾದ ಗಾಯವಾಗಿದೆ. ಜತೆಗೆ ಇಬ್ಬರು ಮಹಿಳೆಯ ಕಾಲಿಗೆ ಗಾಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್‌ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಿಂದ ಸಿಡಿದೆದ್ದಿರುವ ಓಂ ಶಕ್ತಿ ಮಾಲಾಧಾರಿಗಳು ಮತ್ತು ನೂರಾರುಸ್ಥಳೀಯರು ಜೆ.ಜೆ ನಗರ ಠಾಣೆ ಮುಂದೆ ಜಮಾಯಿಸಿ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮಜರುಗಿಸಬೇಕೆಂದು ಆಗ್ರಹಿಸಿಪ್ರತಿಭಟನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಮುಂದೆ ಹಾಗೂ ಜೆ.ಜೆ ನಗರ ಠಾಣೆ ಮುಂದೆ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಸ್ಥಳದಿಂದ
ತೆರಳುವಂತೆ ಸೂಚಿಸಿದರು. ಪೊಲೀಸರ ಸೂಚ ನೆಗೆ ಜಗ್ಗದೇ ನೂರಾರು ಮಂದಿ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗಿ ದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.ಸ್ಥಳದಲ್ಲಿಕೆಲಕಾಲಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ, ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸೂಚಿಸಿದ್ದಾರೆ. ಮತ್ತೊಂದೆಡೆ ಠಾಣೆ ಮುಂಭಾಗ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಓಂಶಕ್ತಿ ಮಾಲಾಧಾರಿಗಳಿಗೆ ಪ್ರತಿಭಟನೆ ಕೈ ಬಿಡುವಂತೆ ಮನವೊಲಿಕೆ ಮಾಡಿದರು.
ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಅಪ್ರಾಪ್ತ ಬಾಲಕರು ಕಲ್ಲು ತೂರಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಜೆ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








