ಬೆಂಗಳೂರು : ರಾಜ್ಯದಲ್ಲಿ ಕಳೆದ ಏಪ್ರಿಲ್ 16 ರಂದು ನಡೆದ ಸಿಇಟಿ ಪರೀಕ್ಷಾ ವೇಳೆ ಬೀದರ್ ಧಾರವಾಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸಿಇಟಿ ಬರೆಯುವ ವೇಳೆ ಪ್ರವೇಶ ದ್ವಾರದ ಬಳಿ ಅಭ್ಯರ್ಥಿಗಳಿಂದ ಜನಿವಾರ ತಿಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿಇಟಿ ಬರೆಯುವ ವೇಳೆ ಅಭ್ಯರ್ಥಿಗಳ ಜನಿವಾರ ತೆಗೆಯದಿದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ವಿಚಾರವಾಗಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಯಾವ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.