ಬೆಂಗಳೂರು : ರಾಜ್ಯ ಸರ್ಕಾರ ಮಾತುಕತೆ ನಡೆಸದಿದ್ದರೆ ಆಗಸ್ಟ್ 5ರಿಂದ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಸಾರಿಗೆ ನೌಕರ ಸಂಘರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ. ಸಾರಿಗೆ ನೌಖರರ ಜೊತೆಗೆ ಮಾತುಕತೆ ನಡೆಸದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದೆ.ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ಕೂಡ ನೀಡಿದೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾತುಕತೆ ನಡೆಸಿ ಚರ್ಚೆ ನಡೆಸಬೇಕು. ಇಲ್ಲವಾದಲ್ಲಿ ಆಗಸ್ಟ್ 5ರಿಂದ ರಾಜ್ಯಾದ್ಯಂತ ಒಂದೇ ಒಂದು ಬಸ್ ಕೂಡ ರಸ್ತೆಗೆ ಇಳಿಯಲ್ಲ. ಇದು ಖಚಿತ. ಎಲ್ಲಾ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5ರಿಂದ ಅನಿರ್ದಿಷ್ಟಾವದಿ ಮುಷ್ಕರ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.
ಇನ್ನು ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್.5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ ಆರ್ ಟಿಸಿ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಿದೆ.
ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 6 ತಿಂಗಳು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಡಿಸೆಂಬರ್ 31ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ.