ತುಮಕೂರು : ತುಮಕೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರಿನಲ್ಲಿ ಈ ಘಟನೆ ನಡೆದಿದ್ದು, ಪ್ರೀತಿಗೆ ಕುಟುಂಬಸ್ಥರು ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಪ್ರೇಮಿಗಳು ಕರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ರಂಗಶಾಮಣ್ಣ (45), ಅನನ್ಯ (19) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.