ಬಾಗಲಕೋಟೆ : ಬಾಗಲಕೋಟೆಯ ವಿದ್ಯಾಗಿರಿಯ ಖಾಸಗಿ ಪಿಜಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಬಾಗಲಕೋಟೆ ತಾಲೂಕಿನ ಬೀಳಗಿ ತಾಲೂಕಿನ ಸುನಗ ತಾಂಡದ ಸೀಮಾ ರಾಠೋಡ (17) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.ವಾಗ್ದೇವಿ ಪಿಯು ಕಾಲೇಜಿನಲ್ಲಿ ಸೀಮಾ ರಾಠೋಡ ಓದುತ್ತಿದ್ದು, ಸೀಮಾ ಸಾವಿನ ಬಗ್ಗೆ ಕುಟುಂಬದ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು,ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.