BREAKING : ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ : ಲಾಂಗು ಮಚ್ಚುಗಳಿಂದ ಹಲ್ಲೆ.!

ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ಬಳಿಯಿರುವ ಕಾಲೇಜಿನಲ್ಲಿ ರ್ಯಾಗಿಂಗ್ ವಿಚಾರಕ್ಕೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು, ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಆಗಿದ್ದು, ಹಲ್ಲೆ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿವೆ. ಇಬ್ಬರು ವಿದ್ಯಾರ್ಥಿಗಳ ಲಾಂಗು, ಮಚ್ಚುಗಳಿಂದ ಹಲ್ಲೆಗೆ ಯತ್ನಿಸಲಾಗಿದೆ. ಸೆಪ್ಟೆಂಬರ್ 2 ರಂದು ನಡೆದ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.