ಬೆಂಗಳೂರು : ಕರ್ನಾಟಕ ಎಸ್ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಿದ್ದು, 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ:05-07-2025 ರಿಂದ 12-07-2025 ರವರೆಗೆ ನಡೆಸಲು ತೀರ್ಮಾನಿಸಿ, ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ.
ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in/ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಕ್ರಮವಹಿಸಲು ತಿಳಿಸಿದೆ.