ನವದೆಹಲಿ : ಅಮೆರಿಕದ ವಾಷಿಂಗ್ಟನ್ ನಲ್ಲಿ ಹಿಲ್ಟನ್ ಹೋಟೆಲ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಗುಂಡಿನ ದಾಳಿ ನಡೆಸಿದ್ದ. ತಕ್ಷಣ ಭದ್ರತಾ ಸಿಬ್ಬಂದಿಗಳು ಅವರನ್ನು ರಕ್ಷಣೆ ಮಾಡಿದ್ದಾರೆ. ಈ ಒಂದು ಗುಂಡಿನ ದಾಳಿಯ ಕುರಿತಂತೆ ಡೊನಾಲ್ಡ್ ಟ್ರಂಪ್ ವೈಟ್ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಗುಂಡಿನ ದಾಳಿಯ ಬಗ್ಗೆ ಡೊನಾಲ್ಡ್ ಟ್ರಂಪ್ ಮಾತನಾಡಿದರು. ಭದ್ರತಾ ತಪಾಸಣೆ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ ಸಿಬ್ಬಂದಿಗಳು ತಕ್ಷಣ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೀಕ್ರೆಟ್ ಸರ್ವಿಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಒಬ್ಬ ಸಿಬ್ಬಂದಿಗೆ ಗುಂಡು ತಗುಲಿದ್ದು ಅವರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಬಚಾವ್ ಆಗಿದ್ದಾರೆ ಎಂದು ತಿಳಿಸಿದರು.
ಪೆನ್ಸಿಲ್ವೆನಿಯಾದಲ್ಲಿ ನನ್ನ ಮೇಲೆ ದಾಳಿ ನಡೆದಿತ್ತು. ಜೆಡಿ ವ್ಯಾನ್ಸ್ ಸೇರಿದಂತೆ ಹಲವರು ಇದ್ದರು. ಇಂತಹ ದಾಳಿ ಮೊದಲಲ್ಲ. ದಾಳಿಕೊರನ ಬಳಿ ಹಲವು ಶಾಸ್ತ್ರಾಸ್ತ್ರಗಳು ಇದ್ದವು. ಈ ಕಾರ್ಯಕ್ರಮವನ್ನು ಅರಿತುಕೊಂಡೆ ದಾಳಿ ಮಾಡುವ ಉದ್ದೇಶದಿಂದಲೇ ಆತ ಸಿದ್ಧವಾಗಿ ಬಂದಿದ್ದ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿಯಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದರು.








