ಮಂಗಳೂರು : ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗಂಭೀರವಾದ ಆರೋಪ ಕೇಳಿ ಬಂದ ಹಿನ್ನೆಲೆ ಇಂದು ಮಂಗಳೂರು ಪಾಲಿಕೆ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂದಾಯ ಇಂಜಿನಿಯರಿಂಗ್ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಮೇಲು ದಾಳಿ ಮಾಡಿದ್ದಾರೆ.
ಹೌದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಂದಾಯ, ಇಂಜಿನಿಯರಿಂಗ್ ಹಾಗು ಆರೋಗ್ಯ ವಿಭಾಹ ಸೇರಿದಂತೆ ಎಲ್ಲಾ ವಿಭಾಗಗಳ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಧಿಕಾರಿಗಳ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಬಿ ಕುಮಾರಚಂದ್ರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ. ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.