ಬೆಂಗಳೂರು : ಹೈಕಮಾಂಡ್ ನೀಡುವ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು ಸದ್ಯ ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾದ ಶಾಸಕರಾಗಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನಲೆ ಅವರು ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ.
ಏಕಾಏಕಿ ಕೆ.ಎನ್ ರಾಜಣ್ಣರನ್ನು ಸಚಿವ ಈ ವಿಚಾರವಾಗಿ ಪುತ್ರ ಎಂಎಲ್ಸಿ ರಾಜೇಂದ್ರ ರಾಜಣ್ಣ ಪ್ರತಿಕ್ರಿಯೆ ನೀಡಿ, ಸ್ಥಾನದಿಂದ ತೆಗೆಯಲು ಬರಲ್ಲ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಸರ್ಕಾರ ಇತ್ತು ಲೋಪದೋಷ ಸರಿ ಪಡಿಸಿಕೊಳ್ಳಬೇಕೆಂದು ಎಂದು ರಾಜಣ್ಣ ಹೇಳಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಮತ್ತು ರಾಜಣ್ಣ ಅವರನ್ನು ಭೇಟಿ ಮಾಡುತ್ತೇನೆ ಸಿಎಂ ಸಿದ್ದರಾಮಯ್ಯ ಭೇಟಿ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ವಿಧಾನಸೌಧದಲ್ಲಿ ರಾಜನ ಪುತ್ರ ಎಂಎಲ್ಸಿ ರಾಜೇಂದ್ರ ಹೇಳಿಕೆ ನೀಡಿದರು.
ಕೆಲ ದಿನಗಳ ಹಿಂದೆ ಹೈಕಮಾಂಡ್ ಜೊತೆಗೆ ನೇರವಾಗಿ ಸಿಟ್ಟಾಗಿದ್ದ ರಾಜಣ್ಣ ಹೈಕಮಾಂಡ್ ನಾಯಕರ ವಿರುದ್ದವೇ ಮಾತನಾಡಿದ್ದು ಈಗ ಅವರ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಸದ್ಯ ಸಿಎಂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿರುವ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜಣ್ಣ, ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಕ್ಯಾತಸಂದ್ರ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅದೇ ಅವಧಿಯಲ್ಲಿ ಅವರ ಸಾರ್ವಜನಿಕ ಜೀವನ ಪ್ರಾರಂಭವಾಯಿತು. 1976 ರಲ್ಲಿ, ಅವರು ಕ್ಯಾತಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದರು, 1980 ಮತ್ತು 1984 ರ ನಡುವೆ ತುಮಕೂರು ಜಿಲ್ಲಾ ಘಟಕದ ಐಎನ್‌ಸಿಯ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿದ್ದರು.
ಕೆಲವು ದಿನಗಳ ಹಿಂದೆ ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಆದರೆ ತನಿಖಾ ತಂಡ ಕೆ.ಎನ್. ರಾಜಣ್ಣ ಅವರ ಆರೋಪ ಸುಳ್ಳು ಅಂತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.