ಬೆಂಗಳೂರು : ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಸ್ಥಾನಗಳಿಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಸುಧಾಮೂರ್ತಿ ಅವರು ಮತ ಚಲಾಯಿಸಿದ್ದಾರೆ.
ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಬಿಜೆಪಿ 11 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಜೆಡಿಎಸ್ ಮೂರು (ಹಾಸನ, ಮಂಡ್ಯ ಮತ್ತು ಕೋಲಾರ) ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಮೊದಲ ಹಂತದ ಮತದಾನದಲ್ಲಿ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸೌಮ್ಯಾ ರೆಡ್ಡಿ, ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ, ಶ್ರೇಯಸ್ ಪಟೇಲ್ ಮತ್ತು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
ಕರ್ನಾಟಕದಲ್ಲಿ 2ನೇ ಹಂತದ ಮತದಾನ
ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಹಾಸನ, ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ.