ಮಂಗಳೂರು : ಮಂಗಳೂರಿನಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆಯು ರಾಷ್ಟ್ರೀಯ ತನಿಖಾ ದಳ (NIA) ಗೆ ವಹಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ಕೇಂದ್ರ ಸರ್ಕಾರ ಎನ್ಐಎ ತನಿಖೆಗೆ ವಹಿಸಿದೆ.
ಮೇ.1 ರಂದು ಹಿಂದೂಪರ ಸಂಘಟನೆ ಕಾರ್ಯ ಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ಮಂಗಳೂರು ಹೊರವಲಯದ ಬಜ್ಜೆಯ ಕಿನ್ನಿಪದವಿ ನಲ್ಲಿ ಮೇ 1ರಂದು ದುಷ್ಕರ್ಮಿಗಳ ತಂಡ ತಲವಾರುಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಅಂದು ರಾತ್ರಿ ಸುಹಾಸ್ ಶೆಟ್ಟಿ ಕಾರಿನಲ್ಲಿ ಬಟ್ಟೆ ಕಡೆ ತೆರಳುತ್ತಿದ್ದಾಗ ಮೊದಲೇ ಸ್ಕೆಚ್ ಹಾಕಿದ್ದ ದುಷ್ಕರ್ಮಿಗಳು, ಕಿನ್ನಿಪದವು ಎಂಬಲ್ಲಿ ತಮ್ಮ ವಾಹನದಿಂದ ಅಡ್ಡಹಾಕಿ ಬೆನ್ನಟ್ಟಿ ಕೊಂಡು ತಲವಾರುಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.









