ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಮಂಡ್ಯ ಸಂಸದೆ ಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಗಾಗಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಸುಮಲತಾ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುಮಲತಾ ಅಂಬರೀಶ್ ಅವರಿಗೆ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಒಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಶ್ ಹಿರಿದಂತೆ ಹಲವಾರು ಮುಖಂಡರು ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಈ ಒಂದು ಸುಮಲತಾ ಅಂಬರೀಶ್ ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯದಂತಹ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಸಿಟಿ ರವಿ ಸುಮಲತಾ ಪುತ್ರ ಅಂಬರೀಶ್ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.