ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮುದ್ರದ ಬಿಸ್ನಲ್ಲಿ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮುರುಡೇಶ್ವರ ಪೊಲೀಸರು ಮೊರಾರ್ಜಿ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಸೇರಿದಂತೆ ಆರು ಜನರ ವಿರುದ್ಧ ಸ್ವಯಂ ಪ್ರೇರಿತ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಹೌದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ವಸತಿ ಶಾಲೆಯ ಶಿಕ್ಷಕರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪೊಲೀಸರಿಂದ ಇದೀಗ ಸುಮೊಟೋ ಕೇಸ್ ದಾಖಲಾಗಿದೆ.ಮೊರಾರ್ಜಿ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಮುಖ್ಯ ಶಿಕ್ಷಕಿ ಶಕಲಾ (40) ಶಿಕ್ಷಕರಾದ ಆರು ಸುನಿಲ್ (33) ಎಸ್ ಚೌಡಪ್ಪ (34) ಎಸ್ ವಿಶ್ವನಾಥ್ (27) ಸಿಎನ್ ಶಾರದಮ್ಮ (37) ಹಾಗೂ ಕೆ ನರೇಶ್ (30) ಎನ್ನುವವರ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಹಲವು ಶಿಕ್ಷಕ, ಸಿಬ್ಬಂದಿಗಳನ್ನು ವಜಾ ಕೂಡ ಮಾಡಲಾಗಿದೆ.