ಬೆಂಗಳೂರು : ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರು ರಾಜ್ಯಾದ್ಯಂತ ಪೂಜೆ ನಡೆಸುತ್ತಿದ್ದಾರೆ. ಬಾಗಲಕೋಟೆ ಹಾವೇರಿ, ಬೆಳಗಾವಿಯಲ್ಲಿ ಬೆಂಬಲಿಗರು ಪೂಜೆ ಸಲ್ಲಿಸಿದ್ದು 1001, 101 ಈಡುಗಾಯಿ ಮಾಡಿದು ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.
ಅಧಿಕಾರ ಹಂಚಿಕೆ ವಿಚಾರ ಮುನ್ನೆಲೆಗೆ ಬಂದ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಪೂಜೆ ಸಲ್ಲಿಸಿದ್ದಾರೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪೂಜೆ ಸಲ್ಲಿಕೆ ಮಾಡಲಾಗಿದ್ದು, ಡಿಕೆ ಶಿವಕುಮಾರ್ ಆದಷ್ಟು ಬೇಗ ಸಿಎಂ ಆಗಲೆಂದು ಪೂಜೆ ಸಲ್ಲಿಸಿದರು.
ಸಿದ್ದರಾಮಯ್ಯ ತವರಲ್ಲೂ ಕೂಡ ಡಿಕೆ ಶಿವಕುಮಾರ್ ಪರವಾಗಿ ಪೂಜೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಪೂಜೆ ಸಲ್ಲಿಸಲಾಗಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಾಲಾಧಾರಿಗಳು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ.








