ನವದೆಹಲಿ: ಕೊಲೆ ಆರೋಪದ ಮೇಲೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲಿಗೇರಿಸಲ್ಪಡಲಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಉಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಅವರನ್ನು ಉಳಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ಸರ್ಕಾರ ಈ ಹೇಳಿಕೆ ನೀಡಿದೆ.
”ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ, ಆದರೆ ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ. ಯೆಮೆನ್ ಗೆ ಸಂಬಂಧಿಸಿದಂತೆ ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ” ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ನ್ಯಾಯಾಲಯದಲ್ಲಿ ಹೇಳಿದರು