ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಪ್ರತಾಪ್ ಸಿಂಹ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
Supreme Court agrees to hear petition against the Karnataka High Court's order upholding the decision of the state government to invite Booker Prize winner Banu Mushtaq to inaugurate the state sponsored Dasara Mahotsav at the Chamundeshwari temple, Mysuru.
— ANI (@ANI) September 18, 2025