ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ಮಹಾರಾಷ್ಟ್ರದ ಅರ್ಜಿ ವಿಚಾರಣೆ ನಡೆಯಲಿದೆ.
ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ, ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೆ ಎನ್ನುವ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಣಯ ಹೊರಬೀಳುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ ಪರವಾಗಿ ಹಿರಿಯ ನ್ಯಾಯವಾದಿ ನಿಶಾಂತ ಪಾಟೀಲ ವಕಾಲತ್ತು ವಹಿಸಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಸರ್ಕಾರ ಮನವಿ ಮಾಡುವ ಸಾಧ್ಯತೆ ಇದೆ.
2004ರಲ್ಲಿ ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ಗೆ ಗಡಿ ವಿವಾದ ಬಗ್ಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದರೆ ಎರಡು ರಾಜ್ಯಗಳ ವಾದ, ಪ್ರತಿವಾದಕ್ಕೆ ಚಾಲನೆ ಸಿಗಲಿದೆ.








