ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಕೇಸ್ ನಲ್ಲೂ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಹೌದು ಸಹಜ ಲೈಂಗಿಕ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಅವರು, ಪರಪ್ಪನ ಅಗ್ರಹಾರ ಸೇರಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೂರಜ್ ರೇವಣ್ಣ ಅವರ ವಿರುದ್ಧದ 2ನೇ ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನು ನೀಡಿ ಆದೇಶ ನೀಡಿದ್ದಾರೆ.
ಅಸಹಜ ಲೈಂಗಿಕ ದೌರ್ಜನದ 2ನೇ ಪ್ರಕರಣದಲ್ಲೂ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಒಂದು ಆದೇಶ ಹೊರ ಬಿದ್ದಿದೆ. ನಿರೀಕ್ಷಣ ಜಾಮೀನು ನೀಡಿ ಸಂತೋಷ ಗಜಾನನ ಭಟ್ ಈ ಒಂದು ಆದೇಶ ಹೊರಡಿಸಿದ್ದಾರೆ. ಹಾಗಾಗಿ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಎರಡನೇ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿರಲಿಲ್ಲ. ಬಾಡಿ ವಾರೆಂಟ್ ಆಧಾರದಲ್ಲಿ ಪೊಲೀಸರು ಅವರನ್ನು ವಿಚಾರಣೆ ನಡೆಸಿದ್ದರು. ಹೀಗಾಗಿ ಸೂರಜ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡನೇ ಪ್ರಕರಣದಲ್ಲೂ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದ್ದಾರೆ.