ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣಗೆ ಇಂದು ವೈದ್ಯಕೀಯ ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಇಂದು ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದ್ದು, ಸಂತ್ರಸ್ತ ಯುವಕನಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಸಂತ್ರಸ್ತ ಯುವಕನ ಗುಪ್ತಾಂಗಕ್ಕೆ ಸಂಬಂಧಿಸಿದಂತೆ 15 ರೀತಿ ವೈದ್ಯಕೀಯ ಪರೀಕ್ಷೆಯನ್ನು ವೈದ್ಯರು ನಡೆಸಲಿದ್ದಾರೆ ಎನ್ನಲಾಗಿದೆ.
ಸೂರಜ್ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. 16ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.