ಬೆಂಗಳೂರು : ಜೆಡಿಎಸ್ ಪಕ್ಷದ ಶಾಸಕಾಂಗದ ನಾಯಕರಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ ಬಾಬು ಅವರು ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.
ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಹಾಗೂ ಶಾಸಕ ಜಿ.ಟಿ. ದೇವೇಗೌಡ ನಡುವೆ ಶಾಸಕಾಂಗ ನಾಯಕನ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಸುರೇಶ್ ಬಾಬು ಅವರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.