ಬೀದರ್ : ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ.
ಗಂಭೀರವಾಗಿ ಗಾಯಗೊಂಡ ಅನ್ವರ್ ಎಂಬ ಬಾಲಕನಿಗೆ ಹೈದರಾಬಾದ್ ಗೆ ಶಿಫ್ಟ್ ಮಾಡಿದ್ದು, ಮೊಳಗಿ ಮಾರಾಯ ದೇಗುಲಕ್ಕೆ ಹೋಗುವಾಗ ರಸ್ತೆಯಲ್ಲಿ ಒಂದು ಘಟನೆ ಸಂಭವಿಸಿದೆ. ಸ್ಥಳಕ್ಕೆ ಹುಮನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿನಲ್ಲಿ ಇದು ಎರಡನೇ ಬಾರಿ ಸ್ಪೋಟಗೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.








