ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಮಹತ್ವದ ದಿನ. ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಆಯೋಜಿಸಲಾದ ಭವ್ಯ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಕೋಲ್ಕತ್ತಾಗೆ ಆಗಮಿಸಿದ್ದಾರೆ. ಬ್ರಿಗೇಡ್ ಪರೇಡ್ ಮೈದಾನಕ್ಕೆ ಆಗಮಿಸಿದ ಪ್ರಧಾನಿಯವರನ್ನು ಕೇಸರಿ ಕಾರ್ಯಕರ್ತರು ಮತ್ತು ಬೆಂಬಲಿಗರು ಹರ್ಷೋದ್ಗಾರಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು.
ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಲಕ್ಷಾಂತರ ಜನರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಜಮಾಯಿಸಿದ್ದಾರೆ. ಸುವೇಂದು ಅಧಿಕಾರಿ ಅವರೊಂದಿಗೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
#WATCH | Kolkata | Prime Minister Narendra Modi arrives at Kolkata’s iconic Brigade Parade, where the swearing-in ceremony of the BJP government in West Bengal is taking place.
BJP leader Suvendu Adhikari to take oath as the Chief Minister of West Bengal pic.twitter.com/2Zr2u1SjJR
— ANI (@ANI) May 9, 2026
#WATCH | Kolkata | Prime Minister Narendra Modi arrives at Kolkata’s iconic Brigade Parade, where the swearing-in ceremony of the BJP government in West Bengal is taking place.
BJP leader Suvendu Adhikari to take oath as the Chief Minister of West Bengal pic.twitter.com/e6P5ldkxg0
— ANI (@ANI) May 9, 2026








