ಬೆಂಗಳೂರು : 1ನೇ ತರಗತಿಗೆ ಆರು ವರ್ಷ ತುಂಬಿರಬೇಕು ಎಂಬ ನಿಯಮದ ವಿಚಾರವಾಗಿ ರಾಜ್ಯ ಸರ್ಕಾರ ಇದೀಗ ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. 6 ವರ್ಷ ತುಂಬಿರಲೇ ಬೇಕೆಂಬ ನಿಯಮದಲ್ಲಿ ಈ ವರ್ಷವೂ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ರಾಜ್ಯ ಸರ್ಕಾರ ಇದೀಗ 60 ದಿನಗಳ ಸಡಿಲಿಕೆ ನೀಡಿದೆ.
ಈ ಕುರಿತು ವಿಧಾನಸಭೆಯಲ್ಲಿ ಸಚಿವ ಮಧುರ ಬಂಗಾರಪ್ಪ ಘೋಷಣೆ ಮಾಡಿದ್ದು ಕರ್ನಾಟಕ ಶಿಕ್ಷಣ ಕಾಯ್ದೆ 1993ರ ಅಧ್ಯಾಯ ಮೂರು ಸೆಕ್ಷನ್ 20ರ ಪ್ರಕಾರ ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡುವ ಸಂಬಂಧ 60 ದಿನಗಳ ವಿನಾಯಿತಿಯನ್ನು ನೀಡಲಾಗಿರುತ್ತದೆ ಅದರಂತೆ 2026 27ನೇ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾತಿ ನೀಡುವ ಸಂಬಂಧ ಅರವತ್ತು ದಿನಗಳ ಸಡಿಲಿಕೆಯನ್ನು ನೀಡಲಾಗುತ್ತದೆ ಹಾಗೂ ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಕೂಡ ಸಹ ಬದಲಾವಣೆ ಮಾಡಲಾಗುವುದು ಎಂಬ ಮಾಹಿತಿಯನ್ನು ಸದನ ಗಮನಕ್ಕೆ ತರಲು ಬಯಸುತ್ತೇನೆ ಎಂದು ಮಧು ಬಂಗಾರಪ್ಪ ಘೋಷಣೆ ಮಾಡಿದರು.








